ಧಾರವಾಡ: ಮರಾಠಾ ಪ್ರಾಧಿಕಾರ ಬೇಡ ಮರಾಠ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಇಲ್ಲವಾದಲ್ಲಿ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಮರಾಠ ಪ್ರಾಧಿಕಾರ ರಚಿಸಿ 50 ಕೋಟಿ ಘೋಷಣೆ ಮಾಡಿದರು. ಆದರೆ ಲಿಂಗಾಯತ ನಿಗಮಕ್ಕೆ 500 ಕೋಟಿ ಅನುದಾನ ನೀಡಿದರು. ಚುನಾವಣಾ ಗಿಮಿಕ್ ಎಂದು ಇವರು ಪ್ರಾಧಿಕಾರಗಳನ್ನು ರಚನೆ ಮಾಡಿದ್ದಾರೆ. ಹಾಗೇ ನಾವೂ ಚುನಾವಣಾ ತಂತ್ರ ಮಾಡ್ತೀವಿ. ಮರಾಠ ಸಮಾಜದ ಮುಖಂಡರೆಲ್ಲ ಸೇರಿ ಪತ್ರ ಬರೆದು ಮೀಸಲಾತಿಗೆ ಆಗ್ರಹಿಸಬೇಕು. ಸರ್ಕಾರಕ್ಕೆ ಮರಾಠ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿಯಿದ್ದರೆ 2ಎ ಮೀಸಲಾತಿ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೀಸಲಾತಿ ಬಗ್ಗೆ ಸಿಎಂ ಯಡಿಯೂರಪ್ಪ 7 ದಿನಗಳಲ್ಲಿ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಉಪಚುನಾವಣೆ ಮಾತ್ರವಲ್ಲ ಎಲ್ಲಾ ಗ್ರಾಮ ಪಂಚಾಯ್ತಿ ಚುನಾವಣೆಗಳನ್ನು ಕೂಡ ಬಹಿಷ್ಕರಿಸುತ್ತೇವೆ ಎಂದು ಹೇಳಿದ್ದಾರೆ.