
ಕೊರೊನಾ ಎರಡನೆ ಅಲೆ ಆರ್ಭಟ ಮಿತಿಮೀರ್ತಿರೋದ್ರಿಂದ ಹೆಚ್ಚಿನ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಅದೇ ರೀತಿ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೋಲೇಟ್ ಆಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೇಗೂರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದರೂ ಸಹ ವೈದ್ಯರು ಮನೆಯಲ್ಲಿಯೇ ಐಸೋಲೇಟ್ ಆಗುವಂತೆ ಹೇಳಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮುಂಜಾನೆ ಸೋಂಕಿತ ವ್ಯಕ್ತಿಯಲ್ಲಿ ಉಸಿರಾಟದ ತೊಂದರೆ ಮಿತಿಮೀರುತ್ತಿದ್ದಂತೆಯೇ ಕುಟುಂಬಸ್ಥರು ವೈದ್ಯರಿಗೆ ಕರೆ ಮಾಡಿದ್ದಾರೆ.
ವೈದ್ಯರು ಮನೆಗೆ ಬಂದು ಉಸಿರಾಟವನ್ನ ಸರಿ ಮಾಡಲೂ ಯತ್ನಿಸಿದರೂ ಸಹ ಫಲಕಾರಿಯಾಗದೇ ಸೋಂಕಿತ ಸಾವನ್ನಪ್ಪಿದ್ದಾರೆ.