ಮಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದು, ಇದರ ಬೆನ್ನಲ್ಲೇ ಇದೀಗ ದೂರದ ಬಹ್ರೈನ್ ನಿಂದ ರಾಜ್ಯಕ್ಕೆ ಆಕ್ಸಿಜನ್ ಆಗಮನವಾಗಿದೆ.
ಬಹ್ರೈನ್ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ನೌಕಾಪಡೆಯ ಐ ಎನ್ ಎಸ್ ತಲ್ವಾರ್ ಹಡಗು ನವಮಂಗಳೂರಿಗೆ ಬಂದು ತಲುಪಿದೆ. ಇದನ್ನು ಜಿಲ್ಲಾಡಳಿತದ ನೇತೃತ್ವದಲ್ಲಿ ಸಂಗ್ರಹಿಸಿಡಲಾಗುತ್ತಿದೆ.
ಎರಡು ಕ್ರಯೋಜೆನಿಕ್ ಐಸೋ ಕಂಟೇನರ್ ಗಳಲ್ಲಿ ಆಕ್ಸಿಜನ್ ಹಾಗೂ ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಇನ್ನಿತರ ವೈದ್ಯಕೀಯ ಉಪಕರಣಗಳು ಬಂದು ತಲುಪಿದ್ದು, ಇದರಲ್ಲಿ 20 ಮೆಟ್ರಿಕ್ ಟನ್ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಉಳಿದ ಆಕ್ಸಿಜನ್ ನ್ನು ಇನ್ನುಳಿದ ಜಿಲ್ಲೆಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಪೂರೈಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.