ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗಂಟಿಗಾನಹಳ್ಳಿ ಸಮೀಪ ತೋಟದ ಮನೆಯಲ್ಲಿ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನಹಳ್ಳಿಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಮಣಿಕಂಠ, ಚೆನ್ನಕೇಶವ, ಹರೀಶ್ ಎಂಬವರನ್ನು ಪೊಲೀಸರು ಬಂಧಿಸಿ 18,700 ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.