ಐಪಿಎಲ್ ಆರಂಭವಾಗ್ತಿದ್ದಂತೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದ್ದು, ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬ್ಯಾಟರಾಯನಪುರ, ಕೋಣನಕುಂಟೆ, ಪುಟ್ಟೇನಹಳ್ಳಿಯಲ್ಲಿ ದಾಳಿ ನಡೆಸಲಾಗಿದೆ. ಆನ್ಲೈನ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದ್ದು 4.91 ಲಕ್ಷ ರೂ. ನಗದು, 6 ಮೊಬೈಲ್ ಜಪ್ತಿ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.