ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಮಾಡಲು ಎಂದು ಪಕ್ಷದ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಮೂವರ ಹೆಸರನ್ನು ಫೈನಲ್ ಮಾಡಲಾಗಿದೆ. ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಪ್ರಕಾಶ್ ಮತ್ತು ಆರ್.ಆರ್. ನಗರ ಕ್ಷೇತ್ರದ ಅಧ್ಯಕ್ಷ ಬೆಟ್ಟಸ್ವಾಮಿ ಗೌಡ ಹಾಗೂ ಜ್ಞಾನ ಭಾರತಿ ಕೃಷ್ಣಮೂರ್ತಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು ಈ ಮೂವರಲ್ಲಿ ಒಬ್ಬರು ಪಕ್ಷದ ಅಭ್ಯರ್ಥಿಯಾಗಲಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ನಾಯಕರ ಸಭೆ ನಡೆದಿದ್ದು ಸಭೆಯಲ್ಲಿ ಈ ಮೂವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಸಭೆಯ ಬಳಿಕ ಈ ಕುರಿತಂತೆ ಮಾಹಿತಿ ನೀಡಿದ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ಆರ್.ಆರ್. ನಗರ ಕ್ಷೇತ್ರದಲ್ಲಿ ಈ ಬಾರಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು. ಪಕ್ಷದ ಅಭ್ಯರ್ಥಿ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ಹೇಳಿದ್ದಾರೆ.