alex Certify ಉದ್ಯೋಗದ ನಿರೀಕ್ಷೆಯಲ್ಲಿರುವ ನಗರ, ಗ್ರಾಮೀಣ ಯುವಕರು – ಯುವತಿಯರಿಗೆ ಇಲ್ಲಿದೆ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿರುವ ನಗರ, ಗ್ರಾಮೀಣ ಯುವಕರು – ಯುವತಿಯರಿಗೆ ಇಲ್ಲಿದೆ ʼಗುಡ್ ನ್ಯೂಸ್ʼ

ಧಾರವಾಡ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP)  ಯೋಜನೆಯನ್ನು 2020-21 ರ ವರೆಗೆ ಮುಂದುವರಿಸಲಾಗಿದೆ.

ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕಾ ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಸಾಲ ಸೌಲಭ್ಯ ಒದಗಿಸಲು ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು Website:www.kviconline.gov.in/pmegpeportal ಈ ವೆಬ್‍ಸೈಟ್‍ನಲ್ಲಿ ತಿಳಿಸಿದ ಮಾರ್ಗಸೂಚಿಯಂತೆ ಅರ್ಜಿಯನ್ನು ಜೂನ್ 15, 2020 ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0836-2322627, ಸಹಾಯಕ ನಿರ್ದೇಶಕರು-9886412599, ಕೈಗಾರಿಕಾ ವಿಸ್ತರಣಾಧಿಕಾರಿ, ಹುಬ್ಬಳ್ಳಿ-9902412428 ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ, ಧಾರವಾಡ-9886251096 ಹಾಗೂ ಸಿ.ಪಿ. ನಾರಾಯಣಕರ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕೆವಿಐಬಿ, ಧಾರವಾಡ-9480825622 ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...