ಬೆಂಗಳೂರು: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳ ಪಡಿತರ ವಿತರಣೆ ಕಾರ್ಯ ನಾಳೆಯಿಂದ ಆರಂಭವಾಗಲಿದೆ ಎಂದು ಆಹಾರ ಖಾತೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
1.27 ಕೋಟಿ ಅಂತ್ಯೋದಯ, ಬಿಪಿಎಲ್ ಕಾರ್ಡುದಾರರಿಗೆ ಪಡಿತರ ನೀಡಲಾಗುವುದು. ಪ್ರತಿಯೊಬ್ಬರಿಗೂ 5 ಕೆಜಿ ಅಕ್ಕಿ, 1 ಕೆಜಿ ಗೋಧಿ ವಿತರಿಸಲಾಗುವುದು ಎಂದು ವಿಕಾಸಸೌಧದಲ್ಲಿ ಸಚಿವ ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.
ಪ್ರಧಾನ್ ಮಂತ್ರಿ ಉಜ್ವಲ ಯೋಜನೆ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ್ ಸಿಲಿಂಡರ್ ವಿತರಿಸಲಾಗುವುದು. ಅರ್ಹ ಫಲಾನುಭವಿಗಳಿಗೆ ಜೂನ್ ವರೆಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲಾಗುವುದು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕೂಡ ಪಡಿತರ ನೀಡಲಾಗುವುದು ಎಂದು ತಿಳಿಸಿದ್ದಾರೆ.