alex Certify ಆಧಾರ್, ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್, ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯದ ಕಟ್ಟೆಕಡೆಯ ವ್ಯಕ್ತಿಯ ಹಸಿವು ನೀಗಿಸಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಡಿತರ ಪೂರೈಕೆ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುತ್ತಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ 2 ಕೆಜಿ ಕಡಲೆಕಾಳು ಹಾಗೂ ರಾಗಿ ವಿತರಣೆ ಮಾಡುವ ಚಿಂತನೆ ಸರ್ಕಾರ ಹೊಂದಿದ್ದು, ಜೂನ್ ತಿಂಗಳಿಂದ ನೂತನ ಯೋಜನೆ ಜಾರಿಯಾಗಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ವಿವಿಧ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ದಿಢೀರ್ ಭೇಟಿ, ಪಡಿತರ ವಿತರಣೆ ಪರಿಶೀಲಿಸಿದ್ದಾರೆ.

ವಲಸೆ ಬಂದಿರುವ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ ಸಹ ಅವರ ಆಧಾರ್ ಕಾರ್ಡ್ ನ ವಿವರ ಪಡೆದು ಪಡಿತರವನ್ನು ನ್ಯಾಯ ಬೆಲೆ ಅಂಗಡಿ ಮಾಲೀಕರು ವಿತರಿಸಲು ಕ್ರಮವಹಿಸಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಂದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ದೂರು ಹಿನ್ನಲೆ, ಭೇಟಿ ನೀಡಲಾಗುತ್ತಿದ್ದು, ತೂಕ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಬಡವರಿಗೆ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ನೆರವಾಗಬೇಕು. ನ್ಯಾಯಬೆಲೆ ಅಂಗಡಿಗಳ ಮಾಲೀಕರು ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಗೊಳಗಾಗದೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...