alex Certify ಕ್ವಾರಂಟೈನ್ ನಲ್ಲಿ ಸಚಿವ ಸುಧಾಕರ್: ಆನ್ಲೈನ್ ಮೂಲಕ ಘಟಿಕೋತ್ಸವದಲ್ಲಿ ಪದವಿ ಪ್ರದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ನಲ್ಲಿ ಸಚಿವ ಸುಧಾಕರ್: ಆನ್ಲೈನ್ ಮೂಲಕ ಘಟಿಕೋತ್ಸವದಲ್ಲಿ ಪದವಿ ಪ್ರದಾನ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ.

ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಆನ್ಲೈನ್ ಮೂಲಕ ಸಮಾರಂಭ ಉದ್ಘಾಟಿಸಿ ಪದವಿ ಪ್ರದಾನ ಮಾಡಿದ್ದಾರೆ.

ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ಕುಲಪತಿ ಡಾ.ಪಿ. ಬಲರಾಮ್, ಆರೋಗ್ಯ ವಿವಿ ಉಪಕುಲಪತಿ ಡಾ.ಸಚ್ಚಿದಾನಂದ ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾರಂಭ ನಡೆಸಲಾಗಿದ್ದು, ಕುಟುಂಬದ ಸದಸ್ಯರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಲ್ಲಿರುವ ಸಚಿವ ಸುಧಾಕರ್ ಆನ್ಲೈನ್ ಮೂಲಕ ಘಟಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...