alex Certify ಆಧಾರ್ ಜೋಡಣೆ ಮಾಡಿದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್ ಜೋಡಣೆ ಮಾಡಿದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಕೋಲಾರ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ವೆಬ್‍ಸೈಟ್ ವಿಳಾಸ kacdc.karnataka.gov.in ನ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಅನ್‍ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು. ಮಹಿಳೆಯರಿಗೆ – ಶೇ.33ರಷ್ಟು ಮತ್ತು ವಿಶೇಷಚೇತನರಿಗೆ – ಶೇ.5 ರಷ್ಟು ಮೀಸಲಾತಿ ಇರುತ್ತದೆ. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್‍ಗೆ ಜೋಡಣೆಯಾಗಿರಬೇಕು.

ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು:

ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 3 ಲಕ್ಷ ರೂ. ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ:

ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಮತ್ತು ವೃತ್ತಿಪರ ಪಿ.ಎಚ್.ಡಿ., ಕೋರ್ಸ್‍ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ. ಮಿತಿಯೊಳಗಿರಬೇಕು.  ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ +919448451111, ಇ-ಮೇಲ್ support.kacdc@karnataka.gov.in. ಹಾಗೂ ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು kacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ ಎಂದು ಕೋಲಾರ ಜಿಲ್ಲೆಯ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...