alex Certify ಪುಸಲಾಯಿಸಿ ಕರೆದೊಯ್ದು ಕಾಮುಕರಿಂದ ಪೈಶಾಚಿಕ ಕೃತ್ಯ: ಉಸಿರು ನಿಲ್ಲಿಸಿದ ಹುಡುಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುಸಲಾಯಿಸಿ ಕರೆದೊಯ್ದು ಕಾಮುಕರಿಂದ ಪೈಶಾಚಿಕ ಕೃತ್ಯ: ಉಸಿರು ನಿಲ್ಲಿಸಿದ ಹುಡುಗಿ

ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಹುಡದಳ್ಳಿ ಗ್ರಾಮದಲ್ಲಿ 16 ವರ್ಷದ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ.

ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯನ್ನು ಪುಸಲಾಯಿಸಿ ಬೈಕ್ ನಲ್ಲಿ ಕರೆದುಕೊಂಡು ಹೋದ ಯುವಕರು ಲೈಂಗಿಕ ಕಿರುಕುಳ ನೀಡಿ ವಿಷ ಕುಡಿಸಿ ಪರಾರಿಯಾಗಿದ್ದಾರೆ. ತೀವ್ರ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಈ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿ ಅಣಾವರ ಗ್ರಾಮದ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದು, ಉಳಿದ ಇಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ. ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...