
ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಹಾಗೂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಲಾಕ್ಡೌನ್ ಇರುವುದರಿಂದ ಸರಳವಾಗಿ ಮದುವೆಯಾಗುವ ಮೂಲಕ ಮಾದರಿಯಾಗಿದ್ದಾರೆ. ಆಳಂದ ತಾಲೂಕಿನ ಜಿಡಗಾ ಗ್ರಾಮದಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಸರಳವಾಗಿ ಮದುವೆ ನೆರವೇರಿದೆ. ಅಫಜಲಪುರ ತಾಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮೈತ್ರಿಯಾಗಿದ್ದು ಬಿಜೆಪಿ ಸದಸ್ಯರಾಗಿರುವ ಅಧ್ಯಕ್ಷೆ, ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಉಪಾಧ್ಯಕ್ಷರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.