alex Certify ಮಗುವಿಗೆ ಜನ್ಮ ನೀಡಿದ ಕ್ವಾರಂಟೈನ್ ನಲ್ಲಿದ್ದ ಮಹಿಳೆ, ಆಂಬುಲೆನ್ಸ್ ನಲ್ಲೇ ನವಜಾತ ಶಿಶು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗುವಿಗೆ ಜನ್ಮ ನೀಡಿದ ಕ್ವಾರಂಟೈನ್ ನಲ್ಲಿದ್ದ ಮಹಿಳೆ, ಆಂಬುಲೆನ್ಸ್ ನಲ್ಲೇ ನವಜಾತ ಶಿಶು ಸಾವು

ಕಲಬುರ್ಗಿ ಜಿಲ್ಲೆ ಸೇಡಂನಲ್ಲಿ ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಗರ್ಭಿಣಿಯೊಬ್ಬರು ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ದುರದೃಷ್ಟವಶಾತ್ ಜಿಲ್ಲಾ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಹೆರಿಗೆಯಾಗಿ ನವಜಾತ ಶಿಶು ಮೃತಪಟ್ಟಿದೆ.

ಮಹಾರಾಷ್ಟ್ರದ ಪುಣೆಯಿಂದ ಆಗಮಿಸಿದ್ದ ಮಹಿಳೆ ಕುಟುಂಬದವರು ಸೇಡಂನ ಲಾಡ್ಜ್ ಒಂದರಲ್ಲಿ ಕ್ವಾರಂಟೈನ್ ನಲ್ಲಿದ್ದರು. ಭಾನುವಾರ ಬೆಳಿಗ್ಗೆ ಹೆರಿಗೆನೋವು ಕಾಣಿಸಿಕೊಂಡಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲಿಂದ ಕಲ್ಬುರ್ಗಿ ಜಿಲ್ಲಾಸ್ಪತ್ರೆಗೆ ತೆರಳುವಂತೆ ಸೂಚನೆ ನೀಡಲಾಗಿದ್ದು, ಆಂಬುಲೆನ್ಸ್ ನಲ್ಲಿ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಹೆರಿಗೆಯಾಗಿ ಮಗು ಮೃತಪಟ್ಟಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...