alex Certify ಕ್ವಾರಂಟೈನ್ ಸೆಂಟರ್ ನಲ್ಲೇ ಹೆರಿಗೆ, ವಯಸ್ಸಲ್ಲದ ವಯಸ್ಸಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ಸೆಂಟರ್ ನಲ್ಲೇ ಹೆರಿಗೆ, ವಯಸ್ಸಲ್ಲದ ವಯಸ್ಸಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಕಲಬುರಗಿ: ಶಹಬಾದ್ ನಗರದ ಕ್ವಾರಂಟೈನ್ ಸೆಂಟರ್ನಲ್ಲಿ ಅಪ್ರಾಪ್ತೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ, ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಸಮೀಪವಿರುವ ಸೋಮನಹಳ್ಳಿಯಲ್ಲಿ ವಾಸವಾಗಿದ್ದ ಬಾಲಕಿ ಮೇ 17 ರಂದು ಕಾರ್ಮಿಕರೊಂದಿಗೆ ಕಲಬುರ್ಗಿ ನಗರಕ್ಕೆ ಆಗಮಿಸಿದ್ದು, ಬಾಲಕಿಯೊಂದಿಗೆ ತಾಯಿ ಮತ್ತು ಸಹೋದರನನ್ನು ಇಂದಿರಾ ನಗರದ ಕ್ವಾರಂಟೈನ್ ಸೆಂಟರ್ನಲ್ಲಿ ಇರಿಸಲಾಗಿತ್ತು.

ಮಂಗಳವಾರ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕ್ವಾರಂಟೈನ್ ಸೆಂಟರ್ನಲ್ಲಿ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ ಮಾಹಿತಿ ತಿಳಿದ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಭೇಟಿ ನೀಡಿದ್ದು, ತಾಯಿ ಮತ್ತು ಮಗುವನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...