alex Certify ಲಾಕ್ ಡೌನ್ ವೇಳೆಯಲ್ಲೇ ದುಡುಕಿದ ಅಕ್ಕ, ತಮ್ಮ, | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ವೇಳೆಯಲ್ಲೇ ದುಡುಕಿದ ಅಕ್ಕ, ತಮ್ಮ,

ಲಾಕ್ಡೌನ್ ಜಾರಿಯಲ್ಲಿರುವುದರಿಂದ ಮದ್ಯ ಮಾರಾಟ ಬಂದ್ ಆಗಿದೆ. ಮದ್ಯ ಸಿಗದ ಕೆಲವರು ಸ್ಯಾನಿಟೈಸರ್ ಕುಡಿದು ಅಪಾಯ ತಂದುಕೊಳ್ಳುತ್ತಿದ್ದಾರೆ.

ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ಸ್ಯಾನಿಟೈಸರ್ ಸೇವಿಸಿ ಅಕ್ಕ, ತಮ್ಮ ಸಾವನ್ನಪ್ಪಿದ್ದಾರೆ. ಕೂಲಿ ಕಾರ್ಮಿಕರಾದ 45 ವರ್ಷದ ವ್ಯಕ್ತಿ ಮತ್ತು ಆತನ ಸಹೋದರಿ 48 ವರ್ಷದ ಮಹಿಳೆ ಮದ್ಯ ಸಿಗದ ಕಾರಣ ಕಳೆದ ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸಿ ಅಸ್ವಸ್ಥರಾಗಿದ್ದಾರೆ.

ಉಸಿರಾಟ ಸೇರಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕಲಘಟಗಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...