alex Certify ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ: ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ: ಸಿಎಂ ಯಡಿಯೂರಪ್ಪ

ಕಲ್ಬುರ್ಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲ್ಬುರ್ಗಿಯ ಎಸ್.ವಿ.ಪಿ. ಸರ್ಕಲ್ ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ, ಕಲ್ಯಾಣ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಅವರನ್ನು ಗಣ್ಯರು ಬರಮಾಡಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ್, ಬಸವರಾಜ ಪಾಟೀಲ್ ಸೇಡಂ, ಉಮೇಶ್ ಜಾಧವ್, ಬಾಬೂರಾವ್ ಚಿಂಚನಸೂರ, ಬಸವರಾಜ್ ಮತ್ತಿಮೂಡ್, ಡಾ. ಅವಿನಾಶ್ ಜಾಧವ್, ಬಿ.ಜಿ. ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...