alex Certify ಉದ್ಯೋಗದ ನಿರೀಕ್ಷೆಯಲ್ಲಿದ್ದ ಕಲ್ಯಾಣ ಕರ್ನಾಟಕದವರಿಗೆ ಗುಡ್ ನ್ಯೂಸ್: ಪಶು ಸಂಗೋಪನಾ ಇಲಾಖೆಯಲ್ಲಿ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದ ಕಲ್ಯಾಣ ಕರ್ನಾಟಕದವರಿಗೆ ಗುಡ್ ನ್ಯೂಸ್: ಪಶು ಸಂಗೋಪನಾ ಇಲಾಖೆಯಲ್ಲಿ ನೇಮಕಾತಿ

ಬೆಂಗಳೂರು: ಪಶುಸಂಗೋಪನೆ ಇಲಾಖೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಅನುಚ್ಚೇದದ ಭಾಗವಾಗಿರುವ ಬ್ಯಾಕ್ ಲಾಗ್ ಹುದ್ದೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈಗ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಿಕೊಳ್ಳಲು ಕ್ರಮ ವಹಿಸಲಾಗಿದ್ದು ಸದ್ಯದಲ್ಲೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಅಲ್ಲದೇ ಕೊವಿಡ್-19 ಸಂಕಷ್ಟದ ಸಮಯದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಕುರಿತು ಪಶುಸಂಗೋಪನಾ ಸಚಿವರಾದ ಪ್ರಭು ಚೌವ್ಹಾಣ್ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದರ ಪರಿಣಾಮವಾಗಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲಿ ತುಂಬಿಕೊಳ್ಳಲು ಕ್ರಮ ಕೈಗೊಳ್ಳುದಾಗಿ ಸಿಎಂ ಸಹ ಭರವಸೆ ನೀಡಿದ್ದರು. ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಸಂವಿಧಾನದ 371 ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ ಮೀಸಲಾಗಿರುವ 32 ಪಶುವೈದ್ಯ ಪರೀಕ್ಷಕರ ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದೆ.

ಮೂಲ ವೃಂದದ ಒಟ್ಟು ವೃಂದದ ಬಲದಲ್ಲಿ 371 ಜೆ ಅಡಿಯಲ್ಲಿ ಸ್ಥಳೀಯ ವೃಂದದಲ್ಲಿ ಶೇಕಡ 75 ಪ್ರಮಾಣದಲ್ಲಿ ಮೀಸಲಿರಿಸಿದ 32 ಪಶುವೈದ್ಯ ಪರೀಕ್ಷಕರ ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಮತ್ತು ಉದ್ಯೋಗ ಸೃಷ್ಠಿಗೆ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು. ಅಲ್ಲದೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...