ಸಿಎಂ ಪುತ್ರ ವಿಜಯೇಂದ್ರಗೆ ಕೊರೊನಾ 03-10-2020 7:02AM IST / No Comments / Posted In: Karnataka, Latest News ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ವಿಜಯೇಂದ್ರ ಅವರು ಈ ವಿಷಯವನ್ನು ತಿಳಿಸಿದ್ದು, ತಮಗೆ ಯಾವುದೇ ರೋಗ ಲಕ್ಷಣವಿಲ್ಲವೆಂದು ಹೇಳಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ವಿಜಯೇಂದ್ರ ಅವರು ತಿಳಿಸಿದ್ದು, ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ವಿನಂತಿ ಮಾಡಿದ್ದಾರೆ. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. — Vijayendra Yediyurappa (Modi Ka Parivar) (@BYVijayendra) October 2, 2020