alex Certify BIG NEWS: ಬೆಂಗಳೂರಿನಂತೆಯೇ ಇತರೆ ಜಿಲ್ಲೆಗಳಲ್ಲಿಯೂ ಆಮ್ಲಜನಕದ ಅಭಾವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಂತೆಯೇ ಇತರೆ ಜಿಲ್ಲೆಗಳಲ್ಲಿಯೂ ಆಮ್ಲಜನಕದ ಅಭಾವ

ಕೇವಲ ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳಲ್ಲಿಯೂ ವೈದ್ಯಕೀಯ ಆಮ್ಲಜನಕದ ಕೊರತೆ ಕಂಡುಬರುತ್ತಿದ್ದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡೋದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಆಮ್ಲಜನಕದ ಕೊರತೆಯಿಂದಾಗಿ ಕೋಲಾರ, ಮೈಸೂರು ಹಾಗೂ ಇತರೆ ಮೂರು ಜಿಲ್ಲೆಗಳಲ್ಲಿ ತಲಾ ನಾಲ್ಕು ಸಾವು ಸಂಭವಿಸಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಕೆಲ ದಿನಗಳ ಹಿಂದೆಯಷ್ಟೆಯೇ ಹೆಚ್ಚಿನ ಜಿಲ್ಲೆಗಳು ವೈದ್ಯಕೀಯ ಆಮ್ಲಜನಕದ ವಿಚಾರದಲ್ಲಿ ಸ್ವಾವಲಂಬಿಯಾಗಿದ್ದವು. ಆದರೆ ದಿನದಿಂದ ದಿನಕ್ಕೆ ಕೊರೊನಾ ಕೇಸ್​ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು ಆಸ್ಪತ್ರೆಗಳು ಅದರಲ್ಲೂ ವಿಶೇಷವಾಗಿ ಖಾಸಗಿ ವಲಯ ಆಮ್ಲಜನಕದ ಅಭಾವವನ್ನ ಎದುರಿಸುತ್ತಿವೆ.

ರಾಜ್ಯದಲ್ಲಿ ಇದೇ ರೀತಿ ಕೊರೊನಾ ಸೋಂಕಿನಲ್ಲಿ ಏರಿಕೆ ಕಾಣುತ್ತಿದ್ದರೆ ಬೆಂಗಳೂರಿನಂತೆ ಉಳಿದ ಜಿಲ್ಲೆಗಳಲ್ಲಿಯೂ ಪರಿಸ್ಥಿತಿ ಕೈ ಮೀರಿ ಹೋಗಬಹುದು ಎಂದು ಆಮ್ಲಜನಕ ಸರಬರಾಜು ಮೇಲುಸ್ತುವಾರಿ ಅಧಿಕಾರಿ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಕೊರೊನಾ ಕೇಸ್​ ಮಿತಿಮೀರಿದ ಬಳಿಕ ಮೈಸೂರು, ದಕ್ಷಿಣ ಕನ್ನಡ, ಧಾರವಾಡ, ಮಂಡ್ಯ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಆಮ್ಲಜನಕ ಮೂಲ ಪೂರೈಕೆ ಸೌಕರ್ಯವನ್ನ ಹೆಚ್ಚಿಸಲಾಗಿದೆ. ಆದರೆ ಇನ್ನೂ ಕೆಲ ಜಿಲ್ಲೆಗಳು ಹಣದ ಕೊರತೆಯಿಂದಾಗಿ ಈ ಕಾರ್ಯವನ್ನ ಮಾಡಿಲ್ಲ.

ತಾಂತ್ರಿಕ ಸಲಹಾ ಸಮಿತಿಯು ಕಳೆದ ವರ್ಷ ನವೆಂಬರ್​ ತಿಂಗಳಲ್ಲಿಯೇ ಎಲ್ಲಾ ಜಿಲ್ಲೆಗಳಲ್ಲಿ ಆಮ್ಲಜನಕಯುಕ್ತ ಬೆಡ್​ಗಳನ್ನ ಸಿದ್ಧವಿಡಿ ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ ಸರ್ಕಾರ ಈ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ. ಧಾರವಾಡ ಹೊರತುಪಡಿಸಿ ಮಿಕ್ಕೆಲ್ಲ ಜಿಲ್ಲೆಗಳು ಈ ಸಲಹೆಯನ್ನ ನಿರ್ಲಕ್ಷ್ಯಸಿದ್ದವು. ಹಾಗೂ ಈಗ ಅದಕ್ಕೆ ಬೆಲೆ ತೆರುತ್ತಿವೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಸಲು ಹೆಚ್ಚಿನ ಗಮನ ನೀಡುತ್ತಿದೆ. ಆದರೆ ಹೆಚ್ಚಿನ ಸಂಖ್ಯೆಯ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡ್ತಿದ್ದಾರೆ. ಇದರಿಂದ ಆಮ್ಲಜನಕ ಅಭಾವ ಇನ್ನಷ್ಟು ಎದ್ದು ಕಾಣುತ್ತಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...