alex Certify ‘ಕರ್ನಾಟಕಕ್ಕೆ ಮುಂದಿನ ಎರಡು ತಿಂಗಳು ಬಹುದೊಡ್ಡ ಸವಾಲು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕರ್ನಾಟಕಕ್ಕೆ ಮುಂದಿನ ಎರಡು ತಿಂಗಳು ಬಹುದೊಡ್ಡ ಸವಾಲು’

ಕರ್ನಾಟಕದಲ್ಲಿ ಕೊರೊನಾ ಸೋಂಕು ಮುಂದಿನ 15-30 ದಿನಗಳಲ್ಲಿ ದ್ವಿಗುಣವಾಗುವ ಸಾಧ್ಯತೆಯಿದೆ. ಆದ್ದರಿಂದ ಇದನ್ನು ನಿಭಾಯಿಸುವುದು ಸರಕಾರದ ಮುಂದಿರುವ ಬಹುದೊಡ್ಡ ಸವಾಲು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿರುವ ಅವರು, ಮುಂದಿನ ಎರಡು ತಿಂಗಳನ್ನು ನಿಭಾಯಿಸುವುದು ಸರಕಾರದ ಮುಂದಿರುವ ಬಹುದೊಡ್ಡ ಸವಾಲಾಗಿದೆ. ರಾಜ್ಯದಲ್ಲಿ 36ಸಾವಿರ ಕೊರೊನಾ ಸೋಂಕು ಪ್ರಕರಣಗಳಿದ್ದು, ಮುಂದಿನ 15-30 ದಿನಗಳಲ್ಲಿ ಈ ಸಂಖ್ಯೆ ದ್ವಿಗುಣವಾಗಲಿದೆ. ಇದನ್ನು ನಿಭಾಯಿಸಲು ರಾಜ್ಯ ಸರಕಾರ ಸನ್ನದ್ಧವಾಗಿರುವುದರಿಂದ, ರಾಜ್ಯದ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ 8ರಿಂದ ಒಂದು ವಾರದ ಕಾಲ ಸಂಪೂರ್ಣ ಲಾಕ್‌ಡೌನ್‌ ಮಾಡಲು ಸರಕಾರ ನಿರ್ಧರಿಸಿದೆ. ಆದರೆ ಈ ನಡುವೆಯೂ ರಾಜ್ಯದಲ್ಲಿ ನಿತ್ಯ ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ನಿತ್ಯ ಕಾಣಿಸಿಕೊಳ್ಳುತ್ತಿದ್ದೂ, ಇದನ್ನು ನಿಭಾಯಿಸುವುದೇ ಸರಕಾರಕ್ಕೆ ದೊಡ್ಡ ಸಮಸ್ಯೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...