alex Certify BIG BREAKING NEWS: ಲಾಕ್ಡೌನ್ ಸಡಿಲ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ರಾಜ್ಯದಲ್ಲೂ ಲಾಕ್ಡೌನ್ ಕಂಟಿನ್ಯೂ – ಸರ್ಕಾರದ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಲಾಕ್ಡೌನ್ ಸಡಿಲ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ರಾಜ್ಯದಲ್ಲೂ ಲಾಕ್ಡೌನ್ ಕಂಟಿನ್ಯೂ – ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಮೇ 19 ರವರೆಗೆ ಮೇ 2 ರ ಲಾಕ್ಡೌನ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ. ಹೊಸ ಮಾರ್ಗಸೂಚಿ ಬರುವವರೆಗೂ ರಾಜ್ಯದಲ್ಲಿ ಯಥಾಸ್ಥಿತಿ ಮುಂದುವರಿಸಲಾಗುವುದು. ರಾಜ್ಯ ಸರ್ಕಾರದಿಂದ ಹಿರಿಯ ಅಧಿಕಾರಿಗಳಿಗೆ ಈ ಕುರಿತಾಗಿ ಆದೇಶ ನೀಡಲಾಗಿದೆ.

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ಡೌನ್ 3.0 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಮುಂದುವರಿಸುವಂತೆ ಸೂಚನೆ ನೀಡಲಾಗಿದೆ. ಮೇ 19 ರ ವರೆಗೂ ಮೇ 2 ರಂದು ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಲಾಕ್ ಡೌನ್ ಮುಂದುವರಿಕೆ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಕಡ್ಡಾಯವಾಗಿ ಈಗಿರುವ ಲಾಕ್ ಡೌನ್ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ.

ಮುಂದಿನ ಆದೇಶದವರೆಗೆ ಇಲ್ಲವೇ ಮೇ 19 ರ ಮಧ್ಯರಾತ್ರಿಯವರೆಗೆ ಈಗಿರುವ ಲಾಕ್ ಡೌನ್ ಮುಂದುವರೆಸಬೇಕೆಂದು ತಿಳಿಸಲಾಗಿದ್ದು, ಅಲ್ಲಿವರೆಗೂ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಮುಂದುವರೆಯಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...