ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೇ ಸರ್ಕಾರದ ವಿರುದ್ಧ ಮುಷ್ಕರ ನಡೆಸುತ್ತಿದ್ದಾರೆ. ಬಸ್ ಸಂಚಾರ ಸಂಪೂರ್ಣ ಸ್ಥಬ್ಧಗೊಂಡಿರುವುದರಿಂದ ವಿದ್ಯಾರ್ಥಿಗಳು, ರೋಗಿಗಳು, ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಪ್ರಯಾಣಿಕರ ಸಂಕಷ್ಟ ಅರಿತ ಬಸ್ ಚಾಲಕರೊಬ್ಬರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರೂ ಬಿಎಂಟಿಸಿ ಬಸ್ ಚಾಲಕ ತ್ಯಾಗರಾಜ್ ಎಂಬುವವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಿರುವ ತ್ಯಾಗರಾಜ್ ಕಾರ್ಯಕ್ಕೆ ಹೋಟೆಲ್ ಮಾಲೀಕರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬಸ್ ನಲ್ಲೇ ಸನ್ಮಾನ ಮಾಡಲಾಗಿದೆ.
ಫೇಸ್ಬುಕ್ ಮೂಲಕ ನಿಮ್ಮ ಇಮೇಲ್ ವಿಳಾಸ ಲೀಕ್ ಆಗಿದೆಯೇ…? ಹೀಗೆ ಚೆಕ್ ಮಾಡಿ
ಮುಷ್ಕರ ನಡೆಸುತ್ತಿದ್ದರೂ ಕರ್ತವ್ಯಕ್ಕೆ ಹಾಜರಾಗಿರುವ ತ್ಯಾಗರಾಜ್ ವಿರುದ್ಧ ಇತರ ಬಸ್ ಚಾಲಕರು ಗಂಭೀರ ಆರೋಪ ಮಾಡಿದ್ದು, 2014ರಲ್ಲಿ ನಡೆದ ಅಪಘಾತ ಪ್ರಕರಣದಿದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಜೊತೆ ಶಾಮೀಲಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆಂದುಆರೋಪಿಸಿದ್ದಾರೆ. ಆದರೆ ತ್ಯಾಗರಾಜ್ ಹೇಳುವ ಪ್ರಕಾರ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ತಾನು ಕರ್ತವ್ಯಕ್ಕೆ ಹಾಜರಾಗಿ ಬಸ್ ಓಡಿಸುತ್ತಿರುವುದಾಗಿ ಹೇಳಿದ್ದಾರೆ.