
ಇತ್ತೀಚಿನ ದಿನಗಳಲ್ಲಿ ಫೋಟೋ ಶೂಟ್ ಅನ್ನೋದು ಕಾಮನ್ ಆಗಿ ಬಿಟ್ಟಿದೆ. ಕಂಡ ಕಂಡಲ್ಲಿ ಫೋಟೋ ತೆಗೆಸಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದೆ ಒಂದು ಹವ್ಯಾಸ ಮಾಡಿಕೊಂಡಿದ್ದಾರೆ. ನಿಷೇಧಿತ ಪ್ರದೇಶ ಅಥವಾ ಅಂತಹ ಜಾಗಗಳ ಬಗ್ಗೆಯೂ ಅರಿವಿಲ್ಲದೆ ಫೋಟೋ ತೆಗೆಸಿಕೊಳ್ಳುತ್ತಾರೆ. ಇಂತವರಿಗೆಲ್ಲ ಶಿರಸಿಯಲ್ಲಿ ನಡೆದ ಘಟನೆ ಒಂದು ಪಾಠ ಅಂದರೆ ತಪ್ಪಾಗಲಿಕ್ಕಿಲ್ಲ.
ಹೌದು, ಶಿರಸಿಯ ಅರಣ್ಯ ವಿಭಾಗದ ವಾಹನದ ಮೇಲೆ ಯುವತಿಯೊಬ್ಬಳು ತನಗೆ ಬೇಕಾದ ರೀತಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದಾಳೆ. ನಂತರ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳನ್ನು ಪೋಸ್ಟ್ ಮಾಡಿದ್ದಾಳೆ. ಫೋಟೋ ಪೋಸ್ಟ್ ಆಗುತ್ತಿದ್ದಂತೆ ಈ ಫೋಟೋ ವೈರಲ್ ಆಗಿದ್ದು, ಯುವತಿಯ ವಿರುದ್ಧ ಟೀಕೆಗಳು ವ್ಯಕ್ತವಾಗಿವೆ. ಅಲ್ಲದೆ ಸರ್ಕಾರಿ ವಾಹನದ ಮೇಲೆ ಈ ರೀತಿ ಫೋಟೋ ತೆಗೆಸಿಕೊಂಡಿದ್ದು ಎಷ್ಟು ಸರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಲ್ಲಾಪುರ ಎಸಿಎಫ್‌ಗೆ ಸೇರಿದ ವಾಹನ ಇದಾಗಿದೆ. ಇನ್ನೂ ಈ ಫೋಟೋ ವೈರಲ್ ಆಗಿ ಟೀಕೆ ವ್ಯಕ್ತವಾಗುತ್ತಿದ್ದಂತೆ ಫೋಟೊ ತೆಗೆಸಿಕೊಂಡವರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.