alex Certify ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಕುರಿತಾಗಿ ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ  ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಪಶ್ಚಿಮಘಟ್ಟ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಣೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪ್ರಕಾಶ್ ಜಾವಡೇಕರ್ ಅವರೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಏಕರೂಪದ ಅಧಿಸೂಚನೆ ಹೊರಡಿಸಬಾರದು ಎಂದು ಸಿಎಂ ಮನವಿ ಮಾಡಿದ್ದು, ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳು ಕಸ್ತೂರಿರಂಗನ್ ವರದಿ ಕರಡು ತಿರಸ್ಕರಿಸಿದೆ. ರಾಜ್ಯದ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಹಂತಗಳ ಸ್ಥಳೀಯ ಸಂಸ್ಥೆಗಳು ಮತ್ತು ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ರಾಜ್ಯದ ಸಮಸ್ಯೆ ಮತ್ತು ಸವಾಲುಗಳು ಭಿನ್ನವಾಗಿದ್ದು ಎಲ್ಲಾ ರಾಜ್ಯಗಳಿಗೆ ಅನ್ವಯವಾಗುವಂತೆ ಏಕರೂಪದ ಅಧಿಸೂಚನೆ ಹೊರಡಿಸಬಾರದು ಎಂದು ಸಿಎಂ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಪ್ರತಿ ರಾಜ್ಯಕ್ಕೆ ಸಂಬಂಧಿತ ವಿಷಯಗಳ ಕುರಿತಾಗಿ ಪ್ರತ್ಯೇಕ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...