alex Certify BIG NEWS: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಯತ್ನ ಪ್ರಕರಣ – ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಯತ್ನ ಪ್ರಕರಣ – ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಅರೆಸ್ಟ್

ಬೆಂಗಳೂರು: ಪಾರ್ಕ್ ನಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದ ನಟಿ ಸಂಯುಕ್ತಾ ಹೆಗ್ಡೆ ಮತ್ತು ಅವರ ಗೆಳತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಅವರನ್ನು ಬಂಧಿಸಲಾಗಿದೆ.

ಪಾರ್ಕ್ ನಲ್ಲಿ ವರ್ಕೌಟ್ ಮಾಡುವ ಸಂದರ್ಭದಲ್ಲಿ ಅಸಭ್ಯ ಉಡುಪು ಧರಿಸಿ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕವಿತಾರೆಡ್ಡಿ ಹಾಗೂ ಅನಿಲ್ ರೆಡ್ಡಿ ಗಲಾಟೆ ಮಾಡಿದ್ದರು. ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿ ಸಂಯುಕ್ತಾ ಹೆಗ್ಡೆ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗಿತ್ತು.

ಸಂಯುಕ್ತಾ ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರಿಗೆ ದೂರು ನೀಡಿದ್ದು ನಂತರದಲ್ಲಿ ಕವಿತಾರೆಡ್ಡಿ ಕ್ಷಮೆ ಯಾಚಿಸಿ ವಿಡಿಯೋ ಪೋಸ್ಟ್ ಮಾಡಿದ್ದರು. ಇಬ್ಬರ ನಡುವೆ ರಾಜಿ ಸಂಧಾನ ನಡೆಸಲಾಗಿತ್ತು. ಆದರೆ ರಾಜಿ ಸಂಧಾನಕ್ಕೆ ತಮಗೆ ಒಪ್ಪಿಗೆ ಇಲ್ಲವೆಂದು ಸಂಯುಕ್ತಾ ಹೆಗ್ಡೆ ತಿಳಿಸಿದ್ದರೆನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿತಾ ರೆಡ್ಡಿ ಅವರನ್ನು ಬಂಧಿಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರಕರಣದ ಎರಡನೇ ಆರೋಪಿ ಅನಿಲ್ ರೆಡ್ಡಿ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...