alex Certify ಸಿನಿಮೀಯ ಶೈಲಿಯಲ್ಲಿ ನಗರಸಭೆ ಸದಸ್ಯನ ಅಪಹರಿಸಿದ್ದ 7 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮೀಯ ಶೈಲಿಯಲ್ಲಿ ನಗರಸಭೆ ಸದಸ್ಯನ ಅಪಹರಿಸಿದ್ದ 7 ಮಂದಿ ಅರೆಸ್ಟ್

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಅಪಹರಿಸಿದ್ದ 7 ಮಂದಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಬಂಧಿಸಲಾಗಿದೆ.

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಪಕ್ಷದ ಸದಸ್ಯ ಮನೋಹರ ಸ್ವಾಮಿ ಹಿರೇಮಠ ಅವರನ್ನು ಬಿಜೆಪಿ ಸದಸ್ಯರು ಅಪಹರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬೆಂಬಲಿಗರೊಂದಿಗೆ ಸೇರಿದ ಬಿಜೆಪಿ ಕೆಲವು ಸದಸ್ಯರು ಮನೋಹರ ಸ್ವಾಮಿ ಅವರನ್ನು ಅಪಹರಿಸಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅಪಹರಣ ಪ್ರಕರಣ ದಾಖಲಿಸಿಕೊಂಡ ಗಂಗಾವತಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇಂದು ಬೆಳಗ್ಗೆ ಉತ್ತರಕನ್ನಡ ಜಿಲ್ಲೆ ಹಳಿಯಾಳ ಪಟ್ಟಣದ ಪ್ರವಾಸಿ ಮಂದಿರ ಬಳಿ ಹಳಿಯಾಳ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಗಂಗಾವತಿ ಪೊಲೀಸರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ವೇಳೆ ಒಬ್ಬ ಬಿಜೆಪಿ ಕಾರ್ಯಕರ್ತ ಪರಾರಿಯಾಗಿದ್ದು, 7 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...