ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ಮಂಗಳವಾರ ಸಂಜೆ ನಡೆದ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಮಂಚಕ್ಕೆ ಕಟ್ಟಿ ಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಅತ್ಯಾಆಚಾರದ ಶಂಕೆ ವ್ಯಕ್ತವಾಗಿದೆ.
ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮನೆಯಲ್ಲಿ 39 ವರ್ಷದ ಮಹಿಳೆಯೊಬ್ಬರೇ ಇದ್ದ ವೇಳೆಯಲ್ಲಿ ದುಷ್ಕರ್ಮಿಗಳು ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ಪರಶುರಾಮ, ಸಿಪಿಐ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆರಳಚ್ಚು ತಜ್ಞರು, ಶ್ವಾನದಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.