ಮಡಿಕೇರಿ: ರೈತರಿಗೆ ಅನುಕೂಲವಾಗುವಂತೆ ಬಡ್ಡಿ ರಹಿತ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಮಡಿಕೇರಿಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಹೂವು ಬೆಳೆಗಾರರಿಗೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ತರಕಾರಿ ಬೆಳೆದ ರೈತರು ಸರ್ಕಾರಕ್ಕೆ ಸಹಕಾರ ನೀಡಬೇಕು. ರೈತರು ಆತ್ಮ ಸ್ಥೈರ್ಯ ಕಳೆದುಕೊಳ್ಳಬಾರದು ಎಂದು ತಿಳಿಸಿದ್ದಾರೆ.
ಮುಂಗಾರು ಬಿತ್ತನೆಗೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ಸಜ್ಜಾಗಿದೆ. ರೈತರಿಗೆ ಸೌಲಭ್ಯ ಒದಗಿಸಲು ಕಿಸಾನ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದ್ದಾರೆ.