ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ ಅವರು ಕೊರೋನಾ ಸೋಂಕಿನ ಕುರಿತಾಗಿ ಭವಿಷ್ಯ ನುಡಿದಿದ್ದಾರೆ.
ಈ ಮೊದಲು ರಾಜ್ಯದಲ್ಲಿ ಕೊರೋನಾ ಅಂತಹ ಪರಿಣಾಮವನ್ನೇನೂ ಬೀರುವುದಿಲ್ಲ ಎಂದು ತಿಳಿಸಿದ್ದ ಶ್ರೀಗಳು, ಕಾರ್ತಿಕಮಾಸ, ಆಶ್ವೀಜ ಮಾಸದಲ್ಲಿ ಕೊರೊನಾ ಸೋಂಕು ಹೆಚ್ಚಾಗಲಿದೆ. ಹಳ್ಳಿಗಳ ಜನ ಎಚ್ಚರಿಕೆಯಿಂದ ಇರಬೇಕೆಂದು ಹೇಳಿದ್ದಾರೆ.
ಇನ್ನೂ ಕೆಲವು ತಿಂಗಳುಗಳ ಕಾಲ ಕೊರೋನಾ ಸೋಂಕಿನ ಅಟ್ಟಹಾಸ ಮುಂದುವರೆಯಲಿದೆ. ಜನ ಸ್ವಚ್ಛತೆ, ಸಾಮಾಜಿಕ ಅಂತರದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಸುರಕ್ಷತೆ ಕಾಪಾಡಿಕೊಳ್ಳಬೇಕು. ಹಾಗಾದಾಗ ಮಾತ್ರ ಕೊರೊನಾದಿಂದ ಪಾರಾಗಬಹುದು. ಜನರು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಭಯ, ಆತಂಕವನ್ನು ಬಿಟ್ಟು ಸರ್ಕಾರದ ಜೊತೆಗೆ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.