ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಪಾಳ್ಳೇಗಾರ ಪಾಳ್ಯದಲ್ಲಿ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.
35 ವರ್ಷದ ನಾಗರಾಜ್ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಆತನ ಸ್ನೇಹಿತ ಅಪ್ಪಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ನಾಗರಾಜ್ ಮತ್ತು ಅಪ್ಪಿ ಸ್ನೇಹಿತರಾಗಿದ್ದು ಹಣಕಾಸಿನ ವ್ಯವಹಾರ ಹೊಂದಿದ್ದರು. ಅಪ್ಪಿಗೆ ಸಾಲ ಕೊಟ್ಟಿದ್ದ ನಾಗರಾಜ್ ಆತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ. ಇದೇ ವಿಚಾರಕ್ಕೆ ಗಲಾಟೆಯಾಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಮುಳಬಾಗಿಲು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.