alex Certify ಗಂಡನೊಂದಿಗೆ ಒಂದುಗೂಡಿಸುವುದಾಗಿ ಗೃಹಿಣಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪಕ್ಕದ ಮನೆ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡನೊಂದಿಗೆ ಒಂದುಗೂಡಿಸುವುದಾಗಿ ಗೃಹಿಣಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪಕ್ಕದ ಮನೆ ಯುವಕ

ಕೋಲಾರ: ದೂರವಾಗಿದ್ದ ದಂಪತಿಯನ್ನು ಒಂದುಗೂಡಿಸುವುದಾಗಿ ಗೃಹಿಣಿಯನ್ನು ನಂಬಿಸಿದ ಯುವಕ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಕೇಳಿಬಂದಿದೆ.

ಮಾಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ಮೂಲದ 28 ವರ್ಷದ ಮಹಿಳೆ ಮಾಲೂರಿನ ಆದರ್ಶ ನಗರದಲ್ಲಿ ವಾಸವಾಗಿದ್ದ ಪತಿಯೊಂದಿಗೆ ಭಿನ್ನಾಭಿಪ್ರಾಯ ಬಂದ ಕಾರಣ ಬೆಂಗಳೂರಿನ ಕೋರ್ಟ್ ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ 26 ವರ್ಷದ ಯುವಕ ದಂಪತಿಯನ್ನು ಒಂದು ಮಾಡಿಸುವುದಾಗಿ ನಂಬಿಸಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಏಪ್ರಿಲ್ 18 ರಂದು ಮಹಿಳೆಯನ್ನು ಮನೆಗೆ ಕರೆಸಿಕೊಂಡ ಆರೋಪಿ ನೈಟಿ ಹರಿದುಹಾಕಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಇದರಿಂದ ನೊಂದ ಮಹಿಳೆ, ಮಗನೊಂದಿಗೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರ ಪತಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರಿಗೆ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...