ಕೊಪ್ಪಳ ಜಿಲ್ಲೆ ಕುಕನೂರ ಸಮೀಪದ ತಳಕಲ್ ಗ್ರಾಮದಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಗ್ರಾಮಸ್ಥರು ಥಳಿಸಿದ್ದಾರೆ.
ಕುಕನೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಹನುಮಂತಪ್ಪ ಗ್ರಾಮಸ್ಥರಿಂದ ಥಳಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದಾನೆ. ಮದ್ಯ ಸೇವಿಸಿದ್ದ ಹನುಮಂತಪ್ಪ ಗ್ರಾಮದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಥಳಿಸಿದ್ದಾರೆ ಎನ್ನಲಾಗಿದೆ.
ಆರೋಪಿಯನ್ನು ಥಳಿಸಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಹನುಮಂತಪ್ಪ ತಾನು ಯಾವುದೇ ತಪ್ಪು ಮಾಡಿಲ್ಲವೆಂದು ಹೇಳಿಕೊಂಡಿದ್ದು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎನ್ನಲಾಗಿದೆ.