ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ ಎಂದು ಟೀಕಿಸಿದ್ದಾರೆ.
ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕೂಡ ಘಟನೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.