ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅಡ್ಡಿಪಡಿಸಿಲ್ಲ. ಕಾರ್ಯಕ್ರಮದಲ್ಲಿ ಹೆಚ್ಚು ಜನ ಸೇರದೆ ಕಾರ್ಯಕ್ರಮ ನಡೆಸಲು ತಿಳಿಸಿದ್ದೇನೆ. ಡಿ.ಕೆ. ಶಿವಕುಮಾರ್ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.
ಸಿಎಂ ಹೀಗೆ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಎಂ ಮಾತನಾಡಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಮುಖ್ಯಮಂತ್ರಿಗಳು ದೂರವಾಣಿಯಲ್ಲಿ ಮಾತನಾಡಿದ್ದರು. ಜೂನ್ 14ರಂದು ನಾನು ಕಾರ್ಯಕ್ರಮ ಮಾಡುವುದಿಲ್ಲ. ನಮ್ಮ ಸಿಎಲ್ಪಿ ನಾಯಕರು ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಿ ನಂತರ ಬೇರೆ ದಿನಾಂಕವನ್ನು ಘೋಷಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಕಾರ್ಯಕರ್ತರು ಮತ್ತು ಮುಖಂಡರು ಅನುಮತಿ ಇಲ್ಲದಿದ್ರೂ ಕಾರ್ಯಕ್ರಮ ನಡೆಸಬೇಕೆಂದು ಹೇಳಿದ್ದರು. ಸರ್ಕಾರ ಅನುಮತಿ ನೀಡಿದ್ದರೂ ಡಿ.ಕೆ. ಶಿವಕುಮಾರ್ ಜೂನ್ 14 ರಂದು ಕಾರ್ಯಕ್ರಮ ಮಾಡದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.