
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸಲಾಗಿದೆ. ದಿನೇಶ್ ಗುಂಡೂರಾವ್ ಅವರು ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕಿತ್ತು. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಹೀಗಾಗಿ ಪದಗ್ರಹಣ ಸಮಾರಂಭಕ್ಕೆ ಅನುಮತಿಯನ್ನು ನಿರಾಕರಿಸಲಾಗಿದೆ.
ಜೂನ್ 14ರ ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸಲಾಗಿದೆ. ಕೇಂದ್ರ ಸರ್ಕಾರ ಜೂನ್ 30ರ ವರೆಗೂ ಲಾಕ್ಡೌನ್ ಮುಂದುವರೆಸಿದೆ. ಹಾಗಾಗಿ ನಿಮ್ಮ ಕೋರಿಕೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಸಿಎಂ ಗಮನಕ್ಕೆ ತಂದು ಡಿಕೆಶಿಗೆ ಪತ್ರ ಬರೆದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿ ನೇಮಕವಾಗಿ ತಿಂಗಳುಗಳೇ ಕಳೆದಿದ್ದರೂ, ಲಾಕ್ ಡೌನ್ ಕಾರಣದಿಂದಾಗಿ ಪದಗ್ರಹಣ ಸಮಾರಂಭ 3 ಬಾರಿ ಮುಂದೂಡಿಕೆಯಾಗಿದೆ.