alex Certify ಅಮಿತ್ ಶಾ ಅವಹೇಳನ: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಿತ್ ಶಾ ಅವಹೇಳನ: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಅರೆಸ್ಟ್

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ದೆಹಲಿ ಮೇದಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಕೊರೊನಾ ಸೋಂಕು ತಗಲಿರುವುದರ ಬಗ್ಗೆ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಆನಂದ್ ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅಮಿತ್ ಶಾ ಅವರಿಗೆ ಕೊರೊನಾ ಬಂದಿರುವ ಬಗ್ಗೆ ಕೆಆರ್ ಪುರ ನಿವಾಸಿಯಾಗಿರುವ ಕೆಪಿಸಿಸಿ ಐಟಿ ಸೆಲ್ ಕಾರ್ಯದರ್ಶಿ ಆನಂದ್ ಪ್ರಸಾದ್ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಅವರನ್ನು ಬಂಧಿಸಲಾಗಿದೆ.

ಅಮಿತ್ ಶಾ ಕೊರೊನಾದಿಂದ ಹೊರಗೆ ಬರದಿರಲಿ ಎನ್ನುವ ಅರ್ಥದಲ್ಲಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದು, ಅದನ್ನು ಅಳಿಸಿ ಹಾಕಲಾಗಿದೆ. ಆದರೆ, ಅದಾಗಲೇ ಅದು ವೈರಲ್ ಆಗಿ ಪೊಲೀಸರ ಗಮನಕ್ಕೆ ಬಂದಿದ್ದು, ಕೇಸ್ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...