ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯದ ಬಳಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬರ್ತಡೇ ಪಾರ್ಟಿ ನಡೆಸಲಾಗಿದೆ.
ಲಾಕ್ ಡೌನ್, ನೈಟ್ ಕರ್ಫ್ಯೂ ನಿಯಮ, ಆರ್ಕೆಸ್ಟ್ರಾ, ಧ್ವನಿವರ್ಧಕ ಬಳಸಿ ಪೆಂಡಾಲ್ ಹಾಕಿ ಬರ್ತಡೇ ಪಾರ್ಟಿಯನ್ನು ಆಯೋಜಿಸಲಾಗಿದ್ದು, ಇದನ್ನು ಪ್ರಶ್ನಿಸಿದ ಸ್ಥಳೀಯರಿಗೆ ಆಯೋಜಕರು ಬೆದರಿಕೆ ಹಾಕಿದ್ದಾರೆ. ಕಾವೇರಿ ನದಿಗೆ ಹೊಂದಿಕೊಂಡಂತೆ ಇರುವ ಕೆಆರ್ಎಸ್ ಸಮೀಪದ ತೋಟದಲ್ಲಿ ಪಾರ್ಟಿ ನಡೆದಿದೆ.
ಮೈಸೂರು ಮೂಲದ ವ್ಯಕ್ತಿಗೆ ಸೇರಿದ ತೋಟದಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನೂರಾರು ಮಂದಿ ಭಾಗಿಯಾಗಿದ್ದಾರೆ. ಪೊಲೀಸ್ ಠಾಣೆ ಸಮೀಪದಲ್ಲಿ ಕಾರ್ಯಕ್ರಮ ನಡೆಸಿದರೂ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ವಿಡಿಯೋ ಹರಿದಾಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ಪರಶುರಾಮ್, ಪೊಲೀಸ್ ಇಲಾಖೆಯಿಂದ ಪಾರ್ಟಿಗೆ ಅನುಮತಿ ಪಡೆದಿಲ್ಲ. ಮೈಸೂರಿನ ವ್ಯಕ್ತಿ ತಮ್ಮ ಜನ್ಮದಿನದ ಪ್ರಯುಕ್ತ ಪಾರ್ಟಿಯನ್ನು ಆಯೋಜಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.