ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನನಗೆ ಇಂದು ಕೊರೋನಾ ಸೋಂಕು ದೃಢಪಟ್ಟಿದ್ದು ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.