alex Certify ಬಸ್ ಪ್ರಯಾಣಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಜೂನ್ 30 ರ ವರೆಗೂ ದೇಶಾದ್ಯಂತ ಲಾಕ್ಡೌನ್ ಮುಂದುವರೆಯಲಿದೆ. ಲಾಕ್ಡೌನ್ 5.0 ಘೋಷಣೆ ಮಾಡಿದ ಬೆನ್ನಲ್ಲೇ ಹಲವು ವಿನಾಯಿತಿಗಳನ್ನು ನೀಡಲಾಗಿದೆ.

ಈಗಾಗಲೇ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ ಆರಂಭಿಸಲಾಗಿದೆ. ನೈಟ್ ಕರ್ಫ್ಯೂ ಅವಧಿಯನ್ನು ಸಡಿಲಗೊಳಿಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದ್ದು, ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ಅಂತೆಯೇ ಕೆಎಸ್ಆರ್ಟಿಸಿ ಬಸ್ ಗಳು ರಾತ್ರಿ 9 ಗಂಟೆಯವರೆಗೂ ಸಂಚರಿಸಲಿವೆ. ಸಮಯ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ಕಾರ್ಯಾಚರಣೆಯಲ್ಲಿರುತ್ತವೆ. ರಾಜ್ಯದಲ್ಲಿ ಕೆಎಸ್ಆರ್ಟಿಸಿ ಮತ್ತು ಉಳಿದ ಸಾರಿಗೆ ಬಸ್ ಗಳು ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆಯವರೆಗೆ ಸಂಚರಿಸಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...