ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಒದಗಿಸುವ ಪಾಸ್ ಪಡೆಯಲು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
ಕೆ.ಎಸ್.ಆರ್.ಟಿ.ಸಿ. ವತಿಯಿಂದ ವಿದ್ಯಾರ್ಥಿಗಳ ಉಚಿತ/ರಿಯಾಯಿತಿ ಬಸ್ ಪಾಸ್, ವಿಕಲಚೇತನರ ರಿಯಾಯಿತಿ ಬಸ್ ಪಾಸ್, ಅಂಧರ ಉಚಿತ ಬಸ್ ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್ ಹಾಗೂ ಅಪಘಾತ ಪರಿಹಾರ ನಿಧಿ ಈ ಎಲ್ಲಾ ಸೇವೆಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟ್ಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.
ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಬಸ್ ಪಾಸ್ ಪಡೆಯುವ ಸಂದರ್ಭದಲ್ಲಿ ಅರ್ಜಿ ಹಾಗೂ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಹಾಜರುಪಡಿಸಬೇಕೆಂದು ಕ.ರಾ.ರ.ಸಾ.ನಿ.ದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.