ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ರಿಯಾಯಿತಿ ದರದ ಬಸ್ ಪಾಸ್ ಸೇರಿದಂತೆ ಯಾವುದೇ ರೀತಿಯ ಬಸ್ ಪಾಸ್ ಗೆ ಸಹಾಯಧನ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದ್ದು ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ವಿದ್ಯಾರ್ಥಿಗಳಿಗೆ ವಿತರಿಸುವ ರಿಯಾಯಿತಿ ಬಸ್ ಪಾಸ್ ಅನುದಾನವನ್ನು ಸರ್ಕಾರ ಭರಿಸುವುದಿಲ್ಲ ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ನೀಡಲು ನಿಗಮ ಮತ್ತು ವಿದ್ಯಾರ್ಥಿಗಳು ಶೇಕಡ 25ರಷ್ಟು ಭರಿಸುತ್ತಿದ್ದು, ಶೇಕಡ 50ರಷ್ಟು ಹಣ ಸರ್ಕಾರ ನೀಡುತ್ತಿತ್ತು. ಈಗ ಶೇಕಡ 50ರಷ್ಟು ಹಣವನ್ನು ವಿದ್ಯಾರ್ಥಿಗಳು ಅಥವಾ ಶಿಕ್ಷಣ ಸಂಸ್ಥೆಗಳಿಂದ ಪಡೆಯಬೇಕೆಂದು ಹೇಳಲಾಗಿದೆ.