alex Certify ಊರಿಗೆ ಹೊರಟವರಿಗೆ ಸಿಹಿ ಸುದ್ದಿ, ನಾಳೆಯಿಂದ KSRTC ಸಂಚಾರ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಊರಿಗೆ ಹೊರಟವರಿಗೆ ಸಿಹಿ ಸುದ್ದಿ, ನಾಳೆಯಿಂದ KSRTC ಸಂಚಾರ ಶುರು

ಬೆಂಗಳೂರಿನಿಂದ ಇತರೆ ಜಿಲ್ಲೆಗಳಿಗೆ ನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗಿದೆ.

ಈಗಾಗಲೇ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದ್ದು ಲಾಕ್ಡೌನ್ ಸಡಿಲವಾಗುವ ಹಿನ್ನೆಲೆಯಲ್ಲಿ ಸೋಮವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲಾಗುತ್ತದೆ. ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಮಾರ್ಗಸೂಚಿಗಳನ್ನು ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾಸ್ಕ್ ಧರಿಸುವುದು ಸೇರಿದಂತೆ ಹಲವು ನಿಬಂಧನೆಗಳನ್ನು ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು.

ಕಂಟೇನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರು ಬಸ್ ನಿಲ್ದಾಣದಲ್ಲಿ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಚೌಕ ಬರೆಸಲಾಗಿದೆ. ಬಸ್ ಗಳಲ್ಲಿ 30, 25, 15 ಮಂದಿಗೆ ಪ್ರಯಾಣಕ್ಕೆ ಅವಕಾಶ ಇರುತ್ತದೆ. ಬಹುತೇಕ ರಾಜ್ಯಾದ್ಯಂತ ನಾಳೆಯಿಂದ ವಿವಿಧ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ. ಅದೇ ರೀತಿ ಈಶಾನ್ಯ ಕರ್ನಾಟಕ, ವಾಯುವ್ಯ ಕರ್ನಾಟಕ ಸಾರಿಗೆ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...