ಬೆಂಗಳೂರು: ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಸಿಬ್ಬಂದಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಬೇಕಿದೆ.
ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿಗೆ ನಾಳೆಯಿಂದ ಕೆಲಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ಬಸ್ ಸಂಚರಿಸುವ ಜಿಲ್ಲೆಗಳ ಸಿಬ್ಬಂದಿಗೆ ಹಾಜರಾಗಲು ತಿಳಿಸಲಾಗಿದೆ. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತಿಲ್ಲ ಎಂದು ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಿಂದ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ನಾಳೆಯಿಂದ ಪರಿಸ್ಥಿತಿಗೆ ಅನುಗುಣವಾಗಿ ಬಸ್ ಗಳ ಸಂಚಾರ ಆರಂಭವಾಗಲಿದೆ. ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ನಿಗಮ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಬಸ್ ಗಳ ಕಾರ್ಯಾಚರಣೆ ಇರುತ್ತದೆ ಎನ್ನಲಾಗಿದೆ.