
ಬೆಂಗಳೂರು: ರಾಜ್ಯಾದ್ಯಂತ ಭಾನುವಾರಗಳಂದು ಜಾರಿಯಲ್ಲಿದ್ದ ಲಾಕ್ ಡೌನ್ ಹಾಗೂ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ಕರ್ಫ್ಯೂವನ್ನು ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ತೆರವುಗೊಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ಸಾರಿಗೆಗಳನ್ನು ವಾರದ ಎಲ್ಲಾ ದಿನಗಳಂದು ಹಾಗೂ ರಾತ್ರಿ ಸಾರಿಗೆಗಳನ್ನು ಯಥಾಸ್ಥಿತಿ ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ಕೊರೊನಾ ತಡೆಗೆ ಜಾರಿ ಮಾಡಲಾಗಿದ್ದ ಸಂಡೆ ಲಾಕ್ ಡೌನ್, ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದ್ದು, ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎನ್ನಲಾಗಿದೆ.