alex Certify ಬಸ್ ಪ್ರಯಾಣಿಕರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಭಾನುವಾರಗಳಂದು ಜಾರಿಯಲ್ಲಿದ್ದ ಲಾಕ್ ಡೌನ್ ಹಾಗೂ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ನೈಟ್ ಕರ್ಫ್ಯೂವನ್ನು ಆಗಸ್ಟ್ 1 ರ ಇಂದಿನಿಂದ‌ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ತೆರವುಗೊಳಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ‌ಸಾರಿಗೆ ನಿಗಮದ ಬಸ್ ಗಳನ್ನು ವಾರದ ಎಲ್ಲಾ ದಿನಗಳಂದು ಹಾಗೂ ರಾತ್ರಿ ಸಾರಿಗೆಗಳನ್ನು ಯಥಾಸ್ಥಿತಿ ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಅನ್ ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಿ ಕೊರೋನಾ ತಡೆಗೆ ಜಾರಿ ಮಾಡಲಾಗಿದ್ದ ಸಂಡೇ ಲಾಕ್ ಡೌನ್, ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದ್ದು, ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...