
ಬೆಂಗಳೂರು: ಕೊರೋನಾ ಕಾರಣದಿಂದ ಕೆಎಸ್ಆರ್ಟಿಸಿ ನೇಮಕಾತಿ ಸ್ಥಗಿತಗೊಳಿಸಲಾಗಿದೆ. ಕೆಎಸ್ಆರ್ಟಿಸಿ ಚಾಲಕರು, ಚಾಲಕ ಕಂ ನಿರ್ವಾಹಕ, ತಾಂತ್ರಿಕ ಸಹಾಯಕರು ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳನ್ನು ಕೆಎಸ್ಆರ್ಟಿಸಿ ಸ್ಥಗಿತಗೊಳಿಸಿದೆ.
ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ. ಈ ಕಾರಣದಿಂದ ಮುಂದಿನ ಆದೇಶದವರೆಗೆ ನೇಮಕಾತಿ ಪ್ರಕ್ರಿಯೆ ತಡೆ ಹಿಡಿಯಲಾಗಿದೆ. ನೇಮಕಾತಿ ಪ್ರಕ್ರಿಯೆ ಆರಂಭಿಸಿದ ಬಳಿಕ ಕೆಎಸ್ಆರ್ಟಿಸಿ www.ksrtcjobs.karnataka.gov.in ವೆಬ್ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.