ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಾಗಿರುವುದರಿಂದ ಹೊರ ರಾಜ್ಯಗಳಿಗೂ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ತೆಲಂಗಾಣ, ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ ರಾಜ್ಯಗಳಿಗೆ ಬಸ್ ಸಂಚಾರ ಪುನರಾರಂಭಿಸಲಾಗುವುದು. ಈ ರಾಜ್ಯಗಳಿಂದ ಬಸ್ ಸಂಚಾರಕ್ಕೆ ಒಪ್ಪಿಗೆ ದೊರೆಯುತ್ತಿದ್ದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಂಚಾರ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಆಂಧ್ರಪ್ರದೇಶಕ್ಕೆ ಬಸ್ ಸಂಚಾರ ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ನೆರೆ ರಾಜ್ಯಗಳಿಗೂ ಬಸ್ ಸಂಚಾರ ಆರಂಭಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲು ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.