ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದೆ. ನಿಧಾನವಾಗಿ ಚೇತರಿಕೆ ಕಾಣತೊಡಗಿದ್ದು, ಪ್ರವಾಸಿಗರನ್ನು ಆಕರ್ಷಿಸಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಶೇಕಡ 30 ರಷ್ಟು ಡಿಸ್ಕೌಂಟ್ ಘೋಷಿಸಿದೆ.
ಪ್ರಸಕ್ತ ಸಾಲಿನ ದಸರಾ ಮಹೋತ್ಸವ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಶೇಕಡ 30ರಷ್ಟರವರೆಗೂ ರಿಯಾಯಿತಿ ನೀಡಿ ಪ್ರವಾಸ ಆಯೋಜಿಸಲು ಕ್ರಮಕೈಗೊಳ್ಳಲಾಗಿದೆ. ನವೆಂಬರ್ 30 ರವರೆಗೆ ಟೂರ್ ಪ್ಯಾಕೇಜ್ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ.
ಪ್ರತಿದಿನ ವಾಹನಗಳ ಸ್ಯಾನಿಟೈಸ್ ಮಾಡಲಾಗುವುದು. ಪ್ರವಾಸಕ್ಕೆ ನಿಯೋಜಿತರಾದ ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಸ್ಯಾನಿಟೈಸರ್ ಬಳಸಲು ಸೂಚಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಪ್ರವಾಸೋದ್ಯಮ ನಿಗಮದ ಬುಕಿಂಗ್ ಕೌಂಟರ್ ಗಳು, ಕೆಎಸ್ಸಾರ್ಟಿಸಿ ಅವತಾರ್ ಪೋರ್ಟಲ್ ಹಾಗೂ ರೆಡ್ ಬಸ್ ಪೋರ್ಟಲ್ ಗಳ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲಾಗುತ್ತದೆ. www.kstdc.co ವೆಬ್ಸೈಟ್ ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.