ರಾಜ್ಯ ಸರ್ಕಾರ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುವ ಸಲುವಾಗಿ ಆನ್ ಲೈನ್ ಮೂಲಕ ಮನೆಬಾಗಿಲಿಗೆ ಮದ್ಯ ಪೂರೈಸುವ ಹಾಗೂ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ಆರಂಭಿಸುವ ಕುರಿತು ಚಿಂತನೆ ನಡೆಸಿದೆ.
ಈ ಪ್ರಸ್ತಾವನೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜೊತೆಗೆ ಗ್ರಾಮೀಣ ಭಾಗದಲ್ಲಿ ಎಂಎಸ್ಐಎಲ್ ಮದ್ಯದಂಗಡಿ ಆರಂಭಿಸುವ ಚಿಂತನೆ ಕುರಿತೂ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.
ಲಾಕ್ ಡೌನ್ ಕಾರಣಕ್ಕೆ ಆದಾಯ ಇಲ್ಲದೆ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲೂ ಪರದಾಡುತ್ತಿರುವ ಇಂತಹ ಸಂದರ್ಭದಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.